News Karnataka Kannada
Monday, May 06 2024
ದೆಹಲಿ

ನವದೆಹಲಿ: ನಂದಾವರದ ಮೂವರನ್ನು ಬಂಧಿಸಿದ ಎನ್‌ಐಎ

NIA
Photo Credit : IANS

ನವದೆಹಲಿ: ಪಾಟ್ನಾದಲ್ಲಿ ನರೇಂದ್ರ ಮೋದಿ ಅವರ ರ‍್ಯಾಲಿ ವೇಳೆ ಸ್ಪೋಟಕ್ಕೆ ಸಂಚು ನಡೆಸಿದವರಿಗೆ ನೆರವು ನೀಡಿದ ಆರೋಪದಲ್ಲಿ ನಂದಾ ವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ಟಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್ ಹಾಗೂ ಇಟ್ಬಾಲ್ ಎಂಬವರನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿಲ್ಲ. ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ವಿಚಾರಣೆ ನಡೆಸಿತ್ತು.

ಸಾಕಷ್ಟು ಸಮಯ ತೀವ್ರ ವಿಚಾರಣೆ ನಡೆಸಿದ ಬಳಿಕ ಮೂವರು ಆರೋಪಿಗಳ ಬಂಧನ ಪ್ರಕ್ರಿಯೆ ನಡೆಸಿ, ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಬಳಿಕ ಆರೋಪಿಗಳನ್ನು ತನ್ನ ಕಸ್ಟಡಿಗೆ ಪಡೆದ ಎನ್‌ಐಎ ತಂಡ ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಪಟ್ಟಾಕ್ಕೆ ಕರೆದುಕೊಂಡು ಹೋಗಿರುವುದಾಗಿ ಮೂಲಗಳು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು