Categories: ದೆಹಲಿ

ಹೊಸದಿಲ್ಲಿ: ಡಿ.ವೈ.ಚಂದ್ರಚೂಡ್ ಸಿಜೆಐ ಆಗುವುದರ ವಿರುದ್ಧ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠವು ಅರ್ಜಿದಾರರ ವಕೀಲರಿಗೆ, “ಅರ್ಜಿಯನ್ನು ಸ್ವೀಕರಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ, ಅರ್ಜಿಯನ್ನು ತಪ್ಪಾಗಿ ಗ್ರಹಿಸಲಾಗಿದೆ” ಎಂದು ಹೇಳಿ ಅದನ್ನು ವಜಾಗೊಳಿಸಿತು.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಮಾಡಿದ್ದಾರೆ ಎನ್ನಲಾದ ಕೆಲವು “ಅಕ್ರಮಗಳು, ಕಾನೂನುಬಾಹಿರ ಕೃತ್ಯಗಳನ್ನು” ಅರ್ಜಿದಾರರ ಪರ ವಕೀಲರು ವಿಚಾರಣೆ ವೇಳೆ ಉಲ್ಲೇಖಿಸಿದರು. ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನೂ ಒಳಗೊಂಡ ನ್ಯಾಯಪೀಠ, “ಈ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ” ಎಂದು ವಕೀಲರಿಗೆ ಹೇಳಿತು.

ಕೋವಿಡ್ ಲಸಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಹಿರಿಯ ವಕೀಲರು ಹಾಜರಾದಾಗ, ನ್ಯಾಯಮೂರ್ತಿ ಚಂದ್ರಚೂಡ್ ಅವರ ನ್ಯಾಯಪೀಠವು ಟ್ಯಾಗಿಂಗ್ ಗೆ ಅವಕಾಶ ನೀಡಿತು, ಆದರೆ ಕಿರಿಯ ವಕೀಲರು ಹಾಜರಾದಾಗ ಯಾವುದೇ ಟ್ಯಾಗಿಂಗ್ ಗೆ ಅವಕಾಶ ನೀಡಲಿಲ್ಲ ಎಂದು ವಕೀಲರು ವಾದಿಸಿದರು.

ನ್ಯಾಯಮೂರ್ತಿ ಚಂದ್ರಚೂಡ್ ವಿರುದ್ಧ ರಶೀದ್ ಖಾನ್ ಪಠಾಣ್ ಎಂಬವರು ಭಾರತದ ರಾಷ್ಟ್ರಪತಿಗಳ ಮುಂದೆ ಸಲ್ಲಿಸಿದ ಮನವಿಯ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ನ್ಯಾಯಮೂರ್ತಿ ಚಂದ್ರಚೂಡ್ ವಿರುದ್ಧ ಪ್ರಸಾರವಾದ ಪತ್ರವನ್ನು ಖಂಡಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ಹೇಳಿಕೆಗಳನ್ನು ನೀಡಿವೆ.

Ashika S

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

1 min ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

9 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

26 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

32 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

50 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

55 mins ago