Categories: ದೆಹಲಿ

ನವದೆಹಲಿ: 21 ಕೋಟಿ ಮೌಲ್ಯದ ಹೆರಾಯಿನ್ ನೊಂದಿಗೆ ಇಬ್ಬರು ಅಫ್ಘಾನ್ ಪ್ರಜೆಗಳ ಬಂಧನ

ನವದೆಹಲಿ: ದೆಹಲಿ ಪೊಲೀಸರ ವಿಶೇಷ ಘಟಕವು ನೋಯ್ಡಾದಲ್ಲಿ ಇಬ್ಬರು ಅಫ್ಘಾನ್ ಪ್ರಜೆಗಳನ್ನು ಬಂಧಿಸಿದ್ದು, ಅವರಿಂದ 21 ಕೋಟಿ ರೂಪಾಯಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ವಿಶೇಷ ಘಟಕವು  ಈ ಮಾಹಿತಿಯನ್ನು ನೋಯ್ಡಾ ಪೊಲೀಸರೊಂದಿಗೆ ಹಂಚಿಕೊಂಡಿದೆ ಮತ್ತು ಜಂಟಿ ತಂಡವು ಭಾರಿ ಪ್ರಮಾಣದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ.

“ಹೆರಾಯಿನ್ ಅನ್ನು ಗ್ಯಾರೇಜ್ ನಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಇರಿಸಲಾಗಿತ್ತು. ಗ್ಯಾರೇಜ್ ನಲ್ಲಿ ಇಬ್ಬರು ಮೆಕ್ಯಾನಿಕ್ ಗಳಾದ ಜಿತು ಮತ್ತು ಅಶೋಕ್ ಅವರನ್ನು ಸಹ ಸ್ಥಳದಿಂದ ಬಂಧಿಸಲಾಯಿತು. ಅವರು ಬುಲಂದ್ ಶಹರ್ ನಿವಾಸಿಗಳು. ಹೆರಾಯಿನ್ ಅನ್ನು ಕಾರಿನ ಟ್ರಂಕ್ ನಲ್ಲಿ ಇರಿಸಲಾಗಿದ್ದು, ಅದನ್ನು ಆರೋಪಿಗಳು ಬೇರೆ ವಾಹನವನ್ನು ಬಳಸಿ ಕಳ್ಳಸಾಗಣೆ ಮಾಡುತ್ತಿದ್ದರು” ಎಂದು ಮೂಲಗಳು ತಿಳಿಸಿವೆ.

ಗ್ರೇಟರ್ ನೋಯ್ಡಾದಲ್ಲಿ ಹಲವಾರು ಅಫ್ಘಾನ್ ಪ್ರಜೆಗಳು ಅಧ್ಯಯನ ನಡೆಸುತ್ತಿದ್ದು, ಅವರು ಡ್ರಗ್ ಪೆಡ್ಲಿಂಗ್ನಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ಅಫ್ಘಾನ್ ಪ್ರಜೆಗಳ ಹೆಸರುಗಳನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ.

Ashika S

Recent Posts

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

7 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

9 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

20 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

24 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

35 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

1 hour ago