ನವದೆಹಲಿ: ಕೇಂದ್ರ ದೆಹಲಿಯಲ್ಲಿ ಮಂಗಳವಾರ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಹಿಳೆ ಮತ್ತು ಆಕೆಯ 3 ವರ್ಷದ ಮಗ ಮೃತಪಟ್ಟಿದ್ದು, ಇತರ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಮಾ ಮಸೀದಿಯ ಚಿಟ್ಲಿ ಖಬರ್ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಮೃತರನ್ನು ರುಕ್ಸಾರ್ ಮತ್ತು ಆಕೆಯ ಮಗ ಅಲಿಯಾರ್ ಎಂದು ಗುರುತಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಬೆಳಿಗ್ಗೆ 4.45 ಕ್ಕೆ ಮನೆಯ ಮೇಲ್ಛಾವಣಿ ಕುಸಿದ ಬಗ್ಗೆ ಕರೆ ಬಂದಿದ್ದು, ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು.
“ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಅವರ ಇನ್ನೂ ನಾಲ್ವರು ಮಕ್ಕಳು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.