News Karnataka Kannada
Sunday, April 28 2024
ದೆಹಲಿ

ಡೀಪ್‌ ಫೇಕ್‌ ಗೆ ಕಡಿವಾಣ ಹಾಕಲು ಹೊಸ ಕಾನೂನು: ಕೇಂದ್ರ ಸಚಿವ ಮಾಹಿತಿ

New law to curb deep fake: Union Minister
Photo Credit : News Kannada

ನವದೆಹಲಿ: ಡೀಪ್‌ ಫೇಕ್‌ ತಂತ್ರಜ್ಞಾನ ಹಲವರ ಮಾನ ಅವಮಾನಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನ ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದಿರುವ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಇಂದು ಡೀಪ್‌ಫೇಕ್ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ ಮುಖ್ಯಸ್ಥರನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಅಪರಾಧ ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ ಕಾರ್ಯವಿಧಾನವನ್ನು ಬಲಪಡಿಸುವುದು ಮತ್ತು ಬಳಕೆದಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸದ ಅಗತ್ಯವನ್ನು ಕಂಪನಿಗಳು ಒಪ್ಪಿಕೊಂಡಿವೆ ಎಂದರು.

ಈ ಡೀಪ್‌ ಫೇಕ್‌ ಬೆದರಿಕೆ ಎದುರಿಸಲು ಡಿಸೆಂಬರ್ ಮೊದಲ ವಾರದಲ್ಲಿ ಸಭೆ ನಡೆಸುತ್ತೇವೆ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು