News Karnataka Kannada
Sunday, April 28 2024
ದೆಹಲಿ

ಕೊರೊನಾಗಿಂತಲೂ ಡೇಂಜರ್‌: ನಿಫಾ ಕುರಿತು ತಜ್ಞರು ತಿಳಿಸಿದ್ರು ಭಯಾನಕ ವಿಚಾರ

Nipah is more dangerous than coronavirus: Experts on Nipah
Photo Credit : IANS

ನವದೆಹಲಿ: ಕೋವಿಡ್ ಸೋಂಕಿತರಿಗೆ ಹೋಲಿಸಿದರೆ ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ.

ಕೋವಿಡ್‌ನ 2-3 ಪ್ರತಿಶತಕ್ಕೆ ಹೋಲಿಸಿದರೆ ನಿಫಾ ವೈರಸ್ ಮರಣ ಪ್ರಮಾಣ ಶೇಕಡಾ 40-70 ಇದೆ ಎಂದು ಬಹ್ಲ್‌ ಹೇಳಿದ್ದಾರೆ.

ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ತಲುಪಿದೆ.
ಕೇರಳದಲ್ಲಿ ಪ್ರಕರಣಗಳ ನಿಫಾ ವೈರಸ್‌ ಪ್ರಕರಣಗಳ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ 20 ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪೂರೈಸುವಂತೆ ಆಸ್ಟ್ರೇಲಿಯಾಕ್ಕೆ ಭಾರತ ಬೇಡಿಕೆ ಇಟ್ಟಿದೆ.

2018 ರಲ್ಲಿ ಆಸ್ಟ್ರೇಲಿಯಾದಿಂದ ಹಲವು ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪಡೆದುಕೊಂಡಿದ್ದೇವೆ. ಪ್ರಸ್ತುತ ಕೇವಲ 10 ರೋಗಿಗಳಿಗೆ ಮಾತ್ರ , ಡೋಸ್‌ಗಳು ಲಭ್ಯವಿವೆ” ಎಂದು ಬಹ್ಲ್ ಹೇಳಿದ್ದಾರೆ. ಭಾರತದ ಹೊರಗೆ ನಿಫಾ ವೈರಸ್‌ಗೆ ತುತ್ತಾದ 14 ಜನರು ಮೊನೊಕ್ಲೋನಲ್ ಆಂಟಿಬಾಡಿ ಚಿಕಿತ್ಸೆಯನ್ನು ಪಡೆದ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಡಾ ಬಹ್ಲ್ ಹೇಳಿದ್ದಾರೆ.

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಪರ್ಕ ಪಟ್ಟಿ 1,080ಕ್ಕೆ ಏರಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಹೇಳಿದ್ದಾರೆ. ಈ ಪೈಕಿ 327 ಮಂದಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು