News Karnataka Kannada
Sunday, May 05 2024
ದೆಹಲಿ

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ತೆರಿಗೆ ಹಂಚಿಕೆ ಕುರಿತು ಎನ್​ಡಿಎ ಮತ್ತು ಯುಪಿಎ ಮೈತ್ರಿಕೂಟಗಳ ಮಧ್ಯೆ ವಾಕ್ಸಮರ ನಡೆಯುತ್ತಿರುವುದರ ನಡುವೆಯೇ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದೆ.
Photo Credit : News Kannada

ದೆಹಲಿ: ತೆರಿಗೆ ಹಂಚಿಕೆ ಕುರಿತು ಎನ್​ಡಿಎ ಮತ್ತು ಯುಪಿಎ ಮೈತ್ರಿಕೂಟಗಳ ಮಧ್ಯೆ ವಾಕ್ಸಮರ ನಡೆಯುತ್ತಿರುವುದರ ನಡುವೆಯೇ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ವೇತಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ.

ಸೀತಾರಾಮನ್ ಅವರು ತಮ್ಮ ಮಧ್ಯಂತರ ಬಜೆಟ್ ಭಾಷಣದಲ್ಲಿ 2014 ರವರೆಗಿನ 10 ವರ್ಷಗಳ ಯುಪಿಎ ಆಡಳಿತದಲ್ಲಿ ಆರ್ಥಿಕ ದುರುಪಯೋಗವನ್ನು ವಿವರಿಸುವ ಆರ್ಥಿಕತೆಯ ಬಗ್ಗೆ ಶ್ವೇತಪತ್ರವನ್ನು ಹೊರತರಲಿದೆ ಎಂದು ಘೋಷಿಸಿದ್ದರು. ಎನ್‌ಡಿಎ ಸರ್ಕಾರವು ಆ ವರ್ಷಗಳ ಬಿಕ್ಕಟ್ಟನ್ನು ನಿವಾರಿಸಿದೆ. ಸರ್ವತೋಮುಖ ಅಭಿವೃದ್ಧಿಯೊಂದಿಗೆ ಆರ್ಥಿಕತೆಯನ್ನು ಉನ್ನತ ಸುಸ್ಥಿರ ಬೆಳವಣಿಗೆಯ ಹಾದಿಯಲ್ಲಿ ದೃಢವಾಗಿ ಇರಿಸಲಾಗಿದೆ ಎಂದು ಸೀತಾರಾಮನ್ ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು