Categories: ದೆಹಲಿ

“ಬೇರಿಯಂ” ಪಟಾಕಿ ತಯಾರಿಕೆಗೆ ಅನುಮತಿಯಿಲ್ಲ ಎಂದ ಸುಪ್ರೀಂಕೋರ್ಟ್​

ದೆಹಲಿ: ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್ “ಬೇರಿಯಂ” ಪಟಾಕಿ​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಬೇರಿಯಂ ಬಳಸಿ ಪಟಾಕಿಗಳ ತಯಾರಿಕೆ ಮತ್ತು ಬಳಕೆಗೆ ಕೋರಿ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಿತು.

ದೀಪಾವಳಿ ಹಾಗೂ ಇತರೆ ಹಬ್ಬಗಳಲ್ಲಿ ಪಟಾಕಿ ಹಚ್ಚಲು ಅವಕಾಶ ನೀಡಬೇಕೆ ಎಂಬುದರ ಕುರಿತು ಇಂದು ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ಕಳೆದ ವಾರ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಸ್ಪಷ್ಟನೆ ನೀಡಿದ್ದು, ದೆಹಲಿಯಂತಹ ರಾಜ್ಯಗಳಲ್ಲಿ ಪಟಾಕಿ ಸಂಪೂರ್ಣ ನಿಷೇಧವಿರುವ ರಾಜ್ಯಗಳಲ್ಲಿ ಹಸಿರು ಪಟಾಕಿ ಸುಡುವುದಕ್ಕೂ ಅವಕಾಶವಿಲ್ಲ, ನ್ಯಾಯಾಲಯ ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿತ್ತು.

ಇದಕ್ಕೂ ಮುನ್ನ ದೆಹಲಿಯಲ್ಲಿ ಪಟಾಕಿ ತಯಾರಿಕೆ, ಸಂಗ್ರಹ, ಮಾರಾಟ ಹಾಗೂ ಸಿಡಿಸುವಿಕೆಯ ಮೇಲೆ ಸಮಗ್ರ ನಿಷೇಧ ಹೇರಿರುವ ದೆಹಲಿ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್​ ನಿರಾಕರಿಸಿತ್ತು.

ಪಟಾಕಿ ಸಿಡಿಸುವವರನ್ನು ಶಿಕ್ಷಿಸಿದರೆ ಸಾಲದು ಮತ್ತು ಅಧಿಕಾರಿಗಳು ಈ ಪಟಾಕಿಗಳ ಮೂಲಕ್ಕೆ ಹೋಗಬೇಕು ಎಂದು ನ್ಯಾಯಾಲಯ ಸೂಚನೆ ಕೊಟ್ಟಿದೆ. 2021ರಲ್ಲಿ ಪಟಾಕಿಗಳ ಬಳಕೆಗೆ ಯಾವುದೇ  ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಸಲಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತು.

Ashika S

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

15 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

25 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

37 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago