News Karnataka Kannada
Tuesday, April 16 2024
Cricket
ದೆಹಲಿ

ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ : ಕೇಂದ್ರ ಭರವಸೆ

ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.
Photo Credit : NewsKarnataka

ನವದೆಹಲಿ: ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.

ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು.

ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು