ನವದೆಹಲಿ: 2023-24ನೇ ಸಾಲಿಗೆ ಹೊಸ ತೆರಿಗೆ ಸ್ಲ್ಯಾಬ್ಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ್ದಾರೆ, ಇದರ ಅಡಿಯಲ್ಲಿ ಹೊಸ ಆದಾಯ ತೆರಿಗೆ ವ್ಯವಸ್ಥೆಯಡಿ ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಸಲಾಗುವುದಿಲ್ಲ.
ಪ್ರಸ್ತುತ, 5 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರು ಯಾವುದೇ ಆದಾಯ ತೆರಿಗೆಯನ್ನು ಪಾವತಿಸುವುದಿಲ್ಲ. ಹೊಸ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ರಿಯಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ಹೆಚ್ಚಿಸಲು ನಾನು ಪ್ರಸ್ತಾಪಿಸಿದ್ದೇನೆ ಎಂದು ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 2023-24 ರ ಕೇಂದ್ರ ಬಜೆಟ್ ಮಂಡಿಸುವಾಗ ಹೇಳಿದರು.
3 ಲಕ್ಷದಿಂದ 6 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.5ರಷ್ಟು, 6 ಲಕ್ಷ ರೂ.ಗಳಿಂದ 9 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.10ರಷ್ಟು, 9 ಲಕ್ಷ ರೂ.ಗಳಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.15ರಷ್ಟು ತೆರಿಗೆ ವಿಧಿಸಲಾಗುವುದು.
12 ಲಕ್ಷದಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.20ರಷ್ಟು, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗುವುದು.