News Karnataka Kannada
Monday, May 20 2024
ದೆಹಲಿ

ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ಆಹೋರಾತ್ರಿ ಧರಣಿ

PM's silence on Manipur violence: House adjourned till tomorrow
Photo Credit : News Kannada

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದು, ಲೋಕಸಭೆ ಕಲಾಪವನ್ನು ಮಂಗಳವಾರಕ್ಕೆ ಮೂಂದೂಡಲಾಗಿತ್ತು.
ಈ ನಡುವೆ ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ.
ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು ಇಂಡಿಯಾದ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಜಯ್ ಸಿಂಗ್ ಅವರ ಪತ್ನಿ ಈಗಾಗಲೇ ಸ್ಥಳಕ್ಕೆ ಅಗತ್ಯ ವಸ್ತುಗಳನ್ನು ತಂದಿದ್ದಾರೆ.
ಎಲ್ಲ ಪಕ್ಷಗಳು ತಮ್ಮ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುತ್ತಾರೆ. ಪಕ್ಷಗಳಲ್ಲಿ ಸಂಪೂರ್ಣ ಒಗ್ಗಟ್ಟು ಇದೆ. ಸಿಂಗ್ ಅವರ ಅಮಾನತನ್ನು ಖಂಡಿಸಲಾಗುತ್ತಿದೆ. ಆದರೆ ಇದು ರಾಜ್ಯಸಭೆಯಲ್ಲಾಗಲಿ ಲೋಕಸಭೆಯಲ್ಲಾಗಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕೆಂದು ಒತ್ತಾಯಿಸುವ ಪ್ರತಿಭಟನೆಯಾಗಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು