News Karnataka Kannada
Monday, April 29 2024
ದೆಹಲಿ

ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್

Over 71 lakh WhatsApp accounts banned in India
Photo Credit : Twitter

ನವದೆಹಲಿ: ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಸೆಪ್ಟೆಂಬರ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 71,11,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರದಂತೆ ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು