News Karnataka Kannada
Friday, May 03 2024
ದೆಹಲಿ

ಮೋದಿ ಮೇಲೆ ವಿಶ್ವಾಸವಿಲ್ಲ; ಮಸೀದಿಗಳನ್ನು ಹಿಂದೂಗಳಿಗೆ ಬಿಟ್ಟುಕೊಡುವ ಮಾತೇ ಇಲ್ಲ: ಓವೈಸಿ

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ, ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರುವ ಮಸೀದಿಯನ್ನು ಹಿಂದೂಗಳಿಗೆ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ.
Photo Credit : News Kannada

ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ, ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರುವ ಮಸೀದಿಯನ್ನು ಹಿಂದೂಗಳಿಗೆ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮಸೀದಿ ಸ್ಥಳದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವೈಜ್ಞಾನಿಕ ಸಮೀಕ್ಷೆ ನಡೆಸಿ, ಅಲ್ಲಿ ದೇವಸ್ಥಾನದ ಕುರುಹುಗಳು ಇದ್ದವು ಎಂದಿತ್ತು. ಇದರ ಬಗ್ಗೆ ʼಇಂಡಿಯಾ ಟುಡೇʼಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ ಓವೈಸಿ, ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರಲಿಲ್ಲ. ಆದರೆ ಜ್ಞಾನವಾಪಿಯಲ್ಲಿ ನಿರಂತರ ಪ್ರಾರ್ಥನೆಗಳು ನಡೆಯುತ್ತಿವೆ. ಹಾಗಾಗಿ ಎರಡೂ ಪ್ರಕರಣಗಳಲ್ಲಿ ಒಂದೇ ತೀರ್ಪನ್ನು ಕೊಡಲಾಗದು ಎಂದಿದ್ದಾರೆ.

ಜ್ಞಾನವಾಪಿ ಪ್ರಕರಣ ಇನ್ನೂ ಮುಗಿದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದಿರುವ ಅವರು, ನಿರ್ದಿಷ್ಟ ಸಿದ್ಧಾಂತಕ್ಕಾಗಿ ಕೆಲಸ ಮಾಡುತ್ತಿರುವ ಮೋದಿಯ ಮೇಲೆ ನಮಗೆ ವಿಶ್ವಾಸ ಉಳಿದಿಲ್ಲ ಎಂದಿದ್ದಾರೆ.

ಜ.೩೧ರಂದು ವಾರಣಾಸಿಯ ಜಿಲ್ಲಾ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ನೆಲಮಾಳಗೆಯಲ್ಲಿ ಪೂಜೆ ಸಲ್ಲಿಸಲು ಅರ್ಚಕರಿಗೆ ಅವಕಾಶ ನೀಡಿ ಆದೇಶ ಹೊರಡಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು