News Karnataka Kannada
Monday, April 29 2024
ದೆಹಲಿ

ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ: ಸಚಿವ ಮಣಿಶಂಕರ್ ಅಯ್ಯರ್‌

 ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ. ಭಾರತೀಯರು ಸ್ನೇಹಶೀಲರಾಗಿದ್ದರೆ ಪಾಕಿಸ್ತಾನಿಯರು ಇನ್ನೂ ಹೆಚ್ಚು ಸ್ನೇಹಶೀಲರಾಗಿರುತ್ತಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್‌ ಹೇಳಿರುವ ಮಾತುಗಳಿಗೆ ಭಾರಿ ಟೀಕೆ ವ್ಯಕ್ತವಾಗುತ್ತಿದೆ. 
Photo Credit : News Kannada

ನವದೆಹಲಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ. ಭಾರತೀಯರು ಸ್ನೇಹಶೀಲರಾಗಿದ್ದರೆ ಪಾಕಿಸ್ತಾನಿಯರು ಇನ್ನೂ ಹೆಚ್ಚು ಸ್ನೇಹಶೀಲರಾಗಿರುತ್ತಾರೆ ಆದರೆ ಮೋದಿ ಆಡಳಿತವು ವಿಶ್ವಾಸದ ಬದಲು ದ್ವೇಷ ಮೂಡಿಸಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್‌ ಹೇಳಿರುವ ಮಾತುಗಳಿಗೆ ಭಾರಿ ಟೀಕೆ ವ್ಯಕ್ತವಾಗುತ್ತಿದೆ.

ಪಾಕಿಸ್ತಾನದ ಅಲ್ಹಾಮಾದಲ್ಲಿ ನಡೆದ ಫೈಜ್ ಉತ್ಸವದಲ್ಲಿ ಇತ್ತೀಚೆಗೆ ಮಾತನಾಡಿದ್ದ ಅವರು ನಾನು ಈ ಹಿಂದೆ ಪಾಕಿಸ್ತಾನದಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿ ಕೆಲಸ ಮಾಡಿದ್ದೆ. ಆಗ ಪಾಕಿಸ್ತಾನಿಯರು ನನ್ನನ್ನೂ ನನ್ನ ಪತ್ನಿಯನ್ನೂ ಮುಕ್ತವಾಗಿ ಸ್ವಾಗತಿಸಿ ತುಂಬಾ ಪ್ರೀತಿಯಿಂದ ನೋಡಿಕೊಂಡಿದ್ದರು. ಹೀಗಾಗಿ ಭಾರತ-ಪಾಕಿಸ್ತಾನದ ನಡುವೆ ವಿಶ್ವಾಸ ಮೂಡಿಸುವ ಅಗತ್ಯವಿದೆ. ಆದರೆ ಕಳೆದ 10 ವರ್ಷಗಳ ನರೇಂದ್ರ ಮೋದಿ ಆಡಳಿತವು ವಿಶ್ವಾಸದ ಬದಲು ದ್ವೇಷ ಮೂಡಿಸಿದೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನದಷ್ಟು ಪ್ರೀತಿ ತೋರುವ ಇನ್ನಾವುದೇ ದೇಶವನ್ನು ನಾನು ನೋಡಿಲ್ಲ. ನನ್ನ ಅನುಭವದಲ್ಲಿ ಹೇಳುವುದಾದ್ರೆ ಪಾಕಿಸ್ತಾನಿಯರು ಎಲ್ಲದಕ್ಕೂ ಅತಿಯಾಗಿ ಪ್ರತಿಕ್ರಿಯೆ ನೀಡುತ್ತಾರೆ. ನಾವು ಸ್ನೇಹಶೀಲರಾಗಿದ್ದರೆ ಅವರು ಅತೀ ಸ್ನೇಹಶೀಲರಾಗಿರುತ್ತಾರೆ. ನಾವು ತಿರುಗಿನಿಂತರೆ ಅವರು ಇನ್ನೂ ತೀಕ್ಷ್ಣವಾಗಿ ತಿರುಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪಾಕಿಸ್ತಾನ ಹೇಗೆ ಇಸ್ಲಾಮಿಕ್‌ ಗಣರಾಜ್ಯವಾಗಿದೆಯೋ ಹಾಗೆಯೇ ಭಾರತವನ್ನು ಹಿಂದುತ್ವದ ಗಣರಾಜ್ಯವನ್ನಾಗಿ ಮಾಡುವ ಪ್ರಯತ್ನ ಇತ್ತೀಚಿನ ವರ್ಷಗಳಲ್ಲಿ ನಡೆದಿದೆ. ಇದು ತಪ್ಪು. ಪಾಕಿಸ್ತಾನದ ರಚನೆಯ ಕಾಲದಲ್ಲೇ ನೆಹರು ಹಾಗೂ ಗಾಂಧೀಜಿಯವರು ಭಾರತವನ್ನು ಧರ್ಮದ ಆಧಾರದ ಮೇಲೆ ನಿರ್ಮಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎಂಬುದನ್ನು ಪುನರುಚ್ಛರಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು