ನವದೆಹಲಿ: ಅಮೃತ್ ಕಾಲ್ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತು ಜನರು ಚರ್ಚೆಗಳನ್ನು ಎದುರು ನೋಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ 19 ದಿನಗಳ ಕಾಲ 15 ಕಲಾಪ ನಡೆಯಲಿದೆ ಎಂದು ಅವರು ಟ್ವೀಟ್ ನಲ್ಲಿ ವಿವರಿಸಿದ್ದಾರೆ. ಐದು ರಾಜ್ಯಗಳ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
Winter Session, 2023 of Parliament will commence from 4th December and continue till 22nd December having 15 sittings spread over 19 days. Amid Amrit Kaal looking forward to discussions on Legislative Business and other items during the session.#WinterSession2023 pic.twitter.com/KiboOyFxk0
— Pralhad Joshi (@JoshiPralhad) November 9, 2023