ನವದೆಹಲಿ: ಹೊಸ ಸಂಸತ್ ಭವನದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್ಮಸ್ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.
ಡಿಸೆಂಬರ್ 3 ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಸತ್ ಅಧಿವೇಶನ
ಪ್ರಾರಂಭವಾಗಬಹುದು ಎಂದು ಅವರು ಹೇಳಿದ್ದಾರೆ.
ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 25ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ. ಆದರೆ ಈ ಬಾರಿ ಡಿಸೆಂಬರ್ ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.