News Karnataka Kannada
Friday, May 03 2024
ದೆಹಲಿ

ಸಂಸತ್ತಿನಲ್ಲಿ ದಾಂಧಲೆ ಪ್ರಕರಣ: ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ರೂಪಿಸಿದ್ದ ಆರೋಪಿ!

Parliament violence: Man planning to set himself on fire in front of Parliament
Photo Credit : News Kannada

ನವದೆಹಲಿ: ಮೊನ್ನೆಯಷ್ಟೆ ದೇಶದ ಭದ್ರತೆಗೆ ಸವಾಲು ಒಡ್ಡಿದ ಪ್ರಕರಣವೊಂದು ನಡೆದಿತ್ತು. ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಹೊಗೆ ಬಣ್ಣಮಿಶ್ರಿತ ಹೊಗೆ ದಾಳಿ ನಡೆಸಿದ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಅಡಿಯಲ್ಲಿ ಈಗಾಗಲೇ ಒಟ್ಟು 5 ಮಂದಿ ಆರೋಪಿಗಳನ್ನು ದೆಹಲಿ ಪೊಲೀಸ್‌ ವಿಶೇಷ ತನಿಖಾ ತಂಡ ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ ಆರೋಪಿ ಸಾಗರ್ ಶರ್ಮಾ ತನಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ಹಾಗೂ ಕರಪತ್ರಗಳನ್ನು ವಿತರಿಸಿ ಸರ್ಕಾರಕ್ಕೆ ಸಂದೇಶ ರವಾನಿಸಲು ತೀರ್ಮಾನಿಸಿದ್ದೆ ಎಂದು ಹೇಳಿಕೊಂಡಿದ್ದಾನೆಂದು ತಿಳಿದು ಬಂದಿದೆ.

ಮೊದಲು ಬೆಂಕಿ ಹಚ್ಚಿಕೊಳ್ಳಲು ಬಯಸಿದ್ದೆ. ಇದಕ್ಕಾಗಿ ಜೆಲ್​ ಒಂದನ್ನು ಆನ್​ಲೈನ್​ನಲ್ಲಿ ಆರ್ಡರ್ ಮಾಡಲು ಬಯಸಿದ್ದೆ ಈ ಜೆಲ್​ ಅನ್ನು ದೇಹದ ಮೇಲೆ ಹಚ್ಚಿಕೊಳ್ಳುವ ಮೂಲಕ ಬೆಂಕಿಯಿಂದ ರಕ್ಷಣೆ ಪಡೆಯಬಹುದು, ಆದರೆ ಆನ್​ಲೈನ್​ ಹಣ ಪಾವತಿ ಸಾಧ್ಯವಾಗಿರಲಿಲ್ಲ, ಹೀಗಾಗಿ ಜೆಲ್ ಖರೀದಿಸಲಾಗಲಿಲ್ಲ, ನಂತರ ಯೋಜನೆಯನ್ನು ಕೈಬಿಟ್ಟಿದ್ದೆ ಎಂದು ಹೇಳಿಕೊಂಡಿದ್ದಾನೆ.

ಈ ನಡುವೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಈ ನಡುವೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು