News Karnataka Kannada
Wednesday, May 01 2024
ದೆಹಲಿ

ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆ ಜನರ ಮನ್ನಣೆ

People's recognition for BJP coming to power in three states, Congress in Telangana
Photo Credit : News Kannada

ನವದೆಹಲಿ: ಭಾರಿ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ (ಡಿ.03) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಲಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿದ್ದು, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ.

ಸೋಮವಾರ (ಡಿ.4) ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯಲಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಗೆ ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್‌ ಹೀನಾಯ ಸೋಲು ಕಂಡಿದ್ದು, ತೆಲಂಗಾಣದಲ್ಲಿ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಕಳೆದ ಚುನಾವಣೆಗಿಂತ ಈ ಬಾರಿ 49 ಸ್ಥಾನ ಕಳೆದುಕೊಂಡಂತಾಗಿದ್ದು, ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕಳೆದ ಬಾರಿಗಿಂತ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್‌ ಗಢದಲ್ಲಿ ಈ ವಿಧಾನಸಭಾ ಚುನಾವಣೆಯಲ್ಲಿ 32 ಸ್ಥಾನ ಕಳೆದುಕೊಂಡಿದೆ. ಇದರೊಂದಿಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 2 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಮಧ್ಯಪ್ರದೇಶದಲ್ಲಿಯೂ ಅಧಿಕಾರದ ಗದ್ದುಗೆ ಏರುವ ಕನಸು ಭಗ್ನಗೊಳ್ಳುವ ಮೂಲಕ ಹೀನಾಯ ಮುಖಭಂಗ ಅನುಭವಿಸಿದೆ.

ಫಲಿತಾಂಶದ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 164 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖಭಂಗ ಅನುಭವಿಸಿದೆ.

ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷ 54 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯುವಂತಾಗಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯಲು ಸಿದ್ಧವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು