Categories: ದೆಹಲಿ

ಸಂಸತ್‌ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುವ ವಿರೋಧ ಪಕ್ಷಗಳ ನಿರ್ಧಾರಕ್ಕೆ ಪ್ರಧಾನಿ ಕಿಡಿ

ದೆಹಲಿ: ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುವ ವಿರೋಧ ಪಕ್ಷಗಳ ನಿರ್ಧಾರವನ್ನು ಪ್ರಧಾನಿ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ವಲಸಿಗರ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ, ಮಾಜಿ ಪ್ರಧಾನಿ, ಆಡಳಿತ ಮತ್ತು ವಿರೋಧ ಪಕ್ಷದ ಸಂಸದರೆಲ್ಲ ಒಗ್ಗೂಡಿದ್ದರು. ಅವರೆಲ್ಲ ತಮ್ಮ ದೇಶದ ಐಕ್ಯತೆಗಾಗಿ ಅಲ್ಲಿ ಸೇರಿದ್ದರು ಎಂದು ಹೇಳಿದ್ದಾರೆ.
ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾದ ಮೂರು ರಾಷ್ಟ್ರಗಳ ಪ್ರವಾಸದಿಂದ ಆಗಮಿಸಿದ ನಂತರ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಆಸ್ಟ್ರೇಲಿಯನ್ ಪ್ರಧಾನಿ (ಆಂಟನಿ ಅಲ್ಬನೀಸ್) ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ, ವಿರೋಧ ಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷಗಳ ಸಂಸದರೂ ಭಾಗವಹಿಸಿದ್ದರು. ಎಲ್ಲರೂ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದು ಮೋದಿಯವರ ಖ್ಯಾತಿಯಲ್ಲ, 140 ಕೋಟಿ ಭಾರತೀಯರ ಪ್ರಯತ್ನ ಮತ್ತು ಸ್ಪೂರ್ತಿ ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಶಕ್ತಿ ಎಂದು ವ್ಯಾಖ್ಯಾನಿಸಿದರು.

ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28 ರಂದು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿದ ಒಂದು ದಿನದ ನಂತರ ಪ್ರಧಾನಿಯವರ ಈ ಹೇಳಿಕೆ ಹೊರಬಿದ್ದಿದೆ.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

5 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago