News Karnataka Kannada
Sunday, April 14 2024
Cricket
ದೆಹಲಿ

ಸುರೇಶ್‌ ಹೇಳಿಕೆಗೆ ಮೋದಿ ಪ್ರತಿಕ್ರಿಯೆ; ದೇಶವನ್ನು ಎಷ್ಟು ತುಂಡು ಮಾಡುತ್ತೀರಾ?

ಡಿ.ಕೆ.ಸುರೇಶ್‌ ರ ಪ್ರತ್ಯೇಕ ರಾಷ್ಟ್ರದ ಹೇಳಿಕೆ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಬಿಜೆಪಿಯ ಪಾಲಿಗೆ ಕಾಂಗ್ರೆಸ್ಸ್‌ ವಿರುದ್ಧ ಬಲಿಷ್ಠ ಅಸ್ತ್ರ ಸಿಕ್ಕಂತಾಗಿದೆ. ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮೋದಿ, ದೇಶವನ್ನು ಇನ್ನು ಎಷ್ಟು ತುಂಡು ಮಾಡುತ್ತಿರಾ ಎಂದು ಪ್ರಶ್ನಿಸಿದ್ದಾರೆ.
Photo Credit : News Kannada

ನವದೆಹಲಿ: ಡಿ.ಕೆ.ಸುರೇಶ್‌ ರ ಪ್ರತ್ಯೇಕ ರಾಷ್ಟ್ರದ ಹೇಳಿಕೆ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಬಿಜೆಪಿಯ ಪಾಲಿಗೆ ಕಾಂಗ್ರೆಸ್ಸ್‌ ವಿರುದ್ಧ ಬಲಿಷ್ಠ ಅಸ್ತ್ರ ಸಿಕ್ಕಂತಾಗಿದೆ. ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮೋದಿ, ದೇಶವನ್ನು ಇನ್ನು ಎಷ್ಟು ತುಂಡು ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸ್‌ನವರು ಎಂದೂ ದೇಶವನ್ನು ಜೋಡಿಸಿಲ್ಲ. ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ಅವರು ಹೊರಟು ಹೋದರು, ಆದರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದು ಕಾಂಗ್ರೆಸ್ಸನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಬಜೆಟ್‌ ಕುರಿತು ಮಾತನಾಡುತ್ತ ಡಿಕೆ ಸುರೇಶ್‌ ದಕ್ಷಿಣದಲ್ಲಿ ಪ್ರತ್ಯೇಕ ದೇಶ ರಚಿಸುವ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂದಿದ್ದರು. ಇದಕ್ಕೆ ಕಾಂಗ್ರೆಸ್ಸಿಗರಿಂದಲೇ ವಿರೋಧ ಕೇಳಿಬಂದಿದ್ದು, ಬಿಜೆಪಿಗರು ಸಾಧ್ಯವಾದಲ್ಲೆಲ್ಲಾ ಅವರನ್ನು ಟೀಕಿಸುತ್ತಿದ್ದಾರೆ. ಅಲ್ಲದೆ ಬಿಜೆಪಿ ಕಾರ್ಯಕರ್ತರು ಸುರೇಶ್‌ರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು