Categories: ದೆಹಲಿ

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ ಅವಮಾನಿಸುತ್ತಿದ್ದಾರೆ ಎಂದರು.

ಪೂರ್ವ ಭಾರತದವರು ಚೀನೀಯರಂತೆ ಕಂಡರೆ ದಕ್ಷಿಣ ಭಾರತದವರು ಆಫ್ರಿಕನ್ನರನ್ನು ಹೋಲುತ್ತಾರೆ ಆದರೆ ನಾವು ಎಲ್ಲಾ ಭಾಷಿಗರನ್ನು ಗೌರವಿಸುತ್ತೇವೆ ಎಂದು ವಿವಾದ ಹುಟ್ಟುಹಾಕಿದ್ದರು.

ಸ್ಯಾಮ್​ ಪಿತ್ರೋಡಾ ನೀಡಿದ ಸಂದರ್ಶನದಲ್ಲಿ ನಾವು 75 ವರ್ಷಗಳ ಕಾಲ ಸಂತೋಷದ ವಾತಾವರಣದಲ್ಲಿ ಬದುಕಿದ್ದೇವೆ, ಕೆಲವು ಭಿನ್ನಾಭಿಪ್ರಾಯಗಳಿದ್ದರೂ ಒಟ್ಟಿಗೆ ವಾಸಿಸುತ್ತಿದ್ದೇವೆ. ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್‌ರಂತೆ ಕಾಣುತ್ತಾರೆ, ಉತ್ತರದಲ್ಲಿರುವ ಜನರು ಬಿಳಿಯಂತೆ ಕಾಣುತ್ತಾರೆ ಮತ್ತು ಬಹುಶಃ ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಹೇಳಿದ್ದರು.

ತೆಲಂಗಾಣದ ವಾರಂಗಲ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಅಮೆರಿಕದ ಅಂಕಲ್ ಚರ್ಮದ ಆಧಾರದ ಮೇಲೆ ಭಾರತೀಯರನ್ನು ನಿಂದಿಸಿದ್ದು ತಪ್ಪು ಎಂದು ಪ್ರಧಾನಿ ನರೇಂದ್ರ ಮೋದಿ ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್​ ಪಿತ್ರೋಡಾಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಏಕೆ ಅವಮಾನಿಸುತ್ತಿದ್ದಾರೆ ಎಂದು ಈಗ ನನಗೆ ಅರ್ಥವಾಗುತ್ತಿದೆ.  ಆದಿವಾಸಿ ಕುಟುಂಬದ ಮಗಳಾಗಿರುವ ದ್ರೌಪದಿ ಮುರ್ಮು ಅವರನ್ನು ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸುತ್ತಿದೆ ಎಂದು ನಾನು ತುಂಬಾ ಯೋಚಿಸುತ್ತಿದ್ದೆ ಆದರೆ ಇಂದು ನನಗೆ ಕಾರಣ ತಿಳಿಯಿತು. ಯಾರಾದರೂ ನನ್ನನ್ನು ನಿಂದಿಸಿದರೆ, ನಾನು ಅದನ್ನು ಸಹಿಸಿಕೊಳ್ಳಬಲ್ಲೆ, ಆದರೆ ಜನರನ್ನು ಚರ್ಮದ ಆಧಾರದಲ್ಲಿ ನಿಂತಿಸಿದರೆ ನಾನು ಸಹಿಸಿಕೊಳ್ಳುವುದಿಲ್ಲ ಎಂದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago