ಹೊಸದಿಲ್ಲಿ: ಆಸ್ಟ್ರೇಲಯಾದಲ್ಲಿ ದೇವಾಲಯಗಳ ಮೇಲಿನ ದಾಳಿ ಮತ್ತು ಪ್ರತ್ಯೇಕತಾವಾದಿ ಶಕ್ತಿಗಳ ಚಟುವಟಿಕೆಗಳ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ಸಹವರ್ತಿಯೊಂದಿಗೆ ಪ್ರಸ್ತಾಪಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಮೋದಿ ಹೇಳಿದರು.
ಆಂಥೋನಿ ಅಲ್ಬನೀಸ್ ಅವರೊಂದಿಗೆ ಜಂಟಿ ಹೇಳಿಕೆ ನೀಡಿದ ಪಿಎಂ ಮೋದಿ, “ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿ ಮತ್ತು ಪ್ರತ್ಯೇಕತಾವಾದಿ ಶಕ್ತಿಗಳ ಚಟುವಟಿಕೆಗಳ ಬಗ್ಗೆ, ನಾವು ಈ ಹಿಂದೆಯೂ ಮಾತನಾಡಿದ್ದೇವೆ ಮತ್ತು ಇಂದು ಸಹ ಮಾತನಾಡಿದ್ದೇವೆ” ಎಂದು ಹೇಳಿದರು.
“ಈ ನಿಟ್ಟಿನಲ್ಲಿ ಅವರು ಕೈಗೊಂಡ ಕ್ರಮಗಳಿಗಾಗಿ ನಾನು ಪ್ರಧಾನಿ ಅಲ್ಬನೀಸ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.
“ಭವಿಷ್ಯದಲ್ಲಿಯೂ ಅಂತಹ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಅಲ್ಬನಾನಿ ಇಂದು ಮತ್ತೊಮ್ಮೆ ನನಗೆ ಭರವಸೆ ನೀಡಿದರು” ಎಂದು ಪಿಎಂ ಮೋದಿ ಹೇಳಿದರು.