ದೆಹಲಿ

ಅಜ್ಮೀರ್ ಷರೀಫ್ ದರ್ಗಾಕ್ಕೆ ‘ಚಾದರ್’ ಅನ್ನು ಉಡುಗೊರೆಯಾಗಿ ನೀಡಿದ ಮೋದಿ

ದೆಹಲಿ: ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದ ನಿಯೋಗದೊಂದಿಗೆ ಸಂವಾದ ನಡೆಸಿದ್ದು ಅವರಿಗೆ ಅಜ್ಮೀರ್ ಷರೀಫ್ ದರ್ಗಾಕ್ಕೆ  ಅರ್ಪಿಸಲು ಉದ್ದೇಶಿಸಿರುವ ‘ಚಾದರ್’ ಅನ್ನು ಉಡುಗೊರೆಯಾಗಿ ನೀಡಿದರು.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡ ಮೋದಿ, “ಮುಸ್ಲಿಂ ಸಮುದಾಯದ ನಿಯೋಗವನ್ನು ಭೇಟಿಯಾದೆ. ನಮ್ಮ ಸಂವಾದದ ಸಮಯದಲ್ಲಿ, ನಾನು ಪವಿತ್ರ ಚಾದರ್ ಅನ್ನು ನೀಡಿದ್ದು ಇದನ್ನು ಗೌರವಾನ್ವಿತ ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ಉರೂಸ್ ಸಮಯದಲ್ಲಿ ಇರಿಸಲಾಗುವುದು ಎಂದಿದ್ದಾರೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜಮಾಲ್ ಸಿದ್ದಿಕಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಮೋದಿ ಅವರು ಹಂಚಿಕೊಂಡ ಚಿತ್ರಗಳಲ್ಲಿ, ಪ್ರಧಾನಿ ಅವರು ನಿಯೋಗದೊಂದಿಗೆ ಮಾತನಾಡುತ್ತಿರುವುದು ಮತ್ತು ಅವರಿಗೆ ‘ಚಾದರ್’ ನೀಡುತ್ತಿರುವುದನ್ನು ಕಾಣಬಹುದು. ಸುಮಾರು 10 ಸದಸ್ಯರನ್ನೊಳಗೊಂಡ ನಿಯೋಗವು ಪ್ರಧಾನಮಂತ್ರಿ ಮತ್ತು ಚಾದರ್ ಜತೆ ಪೋಸ್ ನೀಡಿದೆ.

ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ 812 ನೇ ವಾರ್ಷಿಕ ಉರೂಸ್ ಜನವರಿ 8 ರಂದು ಪ್ರಾರಂಭವಾಯಿತು. ಭಿಲ್ವಾರಾದ ಗೋರಿ ಕುಟುಂಬವು ಜನವರಿ 7 ರಂದು ಧ್ವಜಾರೋಹಣ ಮಾಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

21 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

42 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

55 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago