Categories: ದೆಹಲಿ

‘ಮನ್ ಕಿ ಬಾತ್’ನಲ್ಲಿ ಚಾಮರಾಜನಗರದ ವರ್ಷಾ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ

ದೆಹಲಿ: ಇಂದು ಮನ್ ಕಿ ಬಾತ್ ಸರಣಿಯ 107ನೇ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾ ಹಲವು ವಿಚಾರಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ ಚಾಮರಾಜನಗರ ಜಿಲ್ಲೆಯ ವರ್ಷಾ ಎಂಬ ಮಹಿಳೆಯ ಹೆಸರು ಪ್ರಸ್ತಾಪಿಸಿದ್ದಾರೆ. ಮನ್‌ ಕೀ ಬಾತ್‌ ಕಾರ್ಯಕ್ರಮವು ಹೇಗೆ ಜನರ ಜೀವನದಲ್ಲಿ ಬದಲಾವಣೆ ತರುತ್ತಿದೆ, ಜನ ಹೇಗೆ ಸ್ಫೂರ್ತಿಗೊಂಡು ಹಲವು ಕೆಲಸಗಳಲ್ಲಿ ತೊಡಗಿದ್ದಾರೆ ಎಂಬುದನ್ನು ತಿಳಿಸುವಾಗ ಮೋದಿ ಅವರು ವರ್ಷಾ ಅವರನ್ನು ಉದಾಹರಣೆಯಾಗಿ ನೀಡಿದರು.

ಮನ್‌ ಕೀ ಬಾತ್‌ ಕಾರ್ಯಕ್ರಮವು ಹೇಗೆ ಸಕಾರಾತ್ಮಕವಾಗಿ ಪರಿಣಾಮ ಬೀರಿದೆ ಎಂಬುದಕ್ಕೆ ಕರ್ನಾಟಕದ ಚಾಮರಾಜನಗರದ ವರ್ಷಾ ಅವರೇ ಸಾಕ್ಷಿಯಾಗಿದ್ದಾರೆ. ವರ್ಷಾ ಅವರು ಮನ್‌ ಕೀ ಬಾತ್‌ ಕಾರ್ಯಕ್ರಮದ ಒಂದು ಎಪಿಸೋಡ್‌ನಿಂದ ಪ್ರೇರೇಪಣೆಗೊಂಡು ಸ್ವಂತ ಉದ್ಯಮ ಆರಂಭಿಸಿದ್ದಾರೆ. ಬಾಳೆ ಹಣ್ಣಿನ ಸಿಪ್ಪೆಯಿಂದ ಜೈವಿಕ ಗೊಬ್ಬರ ತಯಾರಿಕೆ, ಸ್ಥಳೀಯ ಉತ್ಪನ್ನಗಳನ್ನು ಬಳಸಿ ಕರಕುಶಲ ವಸ್ತುಗಳನ್ನು ತಯಾರಿಸುವುದು ಸೇರಿ ಹಲವು ಚಟುವಟಿಕೆಗಳನ್ನು ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಬೇರೆಯವರಿಗೂ ಉದ್ಯೋಗ ನೀಡಿ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

26 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

39 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

52 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago