News Karnataka Kannada
Friday, May 17 2024
ದೆಹಲಿ

ವಿಶ್ವಕಪ್: ಫೈನಲ್ ಪ್ರವೇಶಿಸಿದ ಭಾರತಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Icc Cricket World Cup 2019: PM Modi, Rahul congratulate India on reaching final
Photo Credit : News Kannada

ನವದೆಹಲಿ: ನಿನ್ನೆ ನಡೆದ 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದ್ದು ಇದೀಗ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಈ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಫೈನಲ್ ಪ್ರವೇಶಿರುವ ಭಾರತ ತಂಡಕ್ಕೆ ನಮ್ಮ ವಿಶೇಷ ಧನ್ಯವಾದಗಳು. ಅದರಲ್ಲೂ ಸೆಮಿಫೈನಲ್ ಪಂದ್ಯದಲ್ಲಿ ವೈಯಕ್ತಿಕ ಪ್ರದರ್ಶನ ನೀಡಿರುವ ವೇಗಿ ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಹಾಗೂ ಶ್ರೇಯರ್ ಅಯ್ಯರ್ ಗೆ ಧನ್ಯವಾದಗಳು. ನಿಮ್ಮ ಈ ಪ್ರದರ್ಶನ ಮುಂದಿನ ಕ್ರಿಕೆಟ್ ಪ್ರೇಮಿಗಳಿಗೆ ಪ್ರೇರಣೆಯಾಗಲಿದೆ ಎಂದು ಬರೆದು ಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಟೀಂ ಇಂಡಿಯಾಗೆ ಶುಭಾಶಯ ಕೋರಿದ್ದಾರೆ. ಟೀಂ ಇಂಡಿಯಾ ಅದ್ಬುತ ಪ್ರದರ್ಶನ ನೀಡಿದೆ. ಆಟದ ಉದ್ದಕ್ಕೂ ತಂಡದ ಪ್ರದರ್ಶನ ಮತ್ತು ಕೌಶಲ್ಯ ಅತ್ಯುತ್ತಮವಾಗಿತ್ತು. ವಿರಾಟ್ ಕೊಹ್ಲಿಯ ಅದ್ಭುತ ಸಾಧನೆಗೆ ಅಭಿನಂದನೆಗಳು. ಹುಡುಗರೇ ವಿಶ್ವಕಪ್ ಅನ್ನು ಗೆದ್ದ ತನ್ನಿ ಎಂದು  ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು