News Karnataka Kannada
Monday, April 29 2024
ದೆಹಲಿ

ದೆಹಲಿ ಮೆಟ್ರೊದಲ್ಲಿ ಸಂಚರಿಸಿದ ಪ್ರಧಾನಿ ಮೋದಿ, ಪ್ರಯಾಣಿಕರ ಸಂಭ್ರಮ

PM Modi takes a ride in Delhi Metro, commutes
Photo Credit : IANS

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನ್ಮದಿನದಂದು ದೆಹಲಿ ಏರ್‌ಪೋರ್ಟ್ ಮೆಟ್ರೋ ಎಕ್ಸ್‌ಪ್ರೆಸ್ ಮಾರ್ಗದ ವಿಸ್ತರಿತ ಮಾರ್ಗವನ್ನು ಉದ್ಘಾಟಿಸಿದರು. ಈ ವೇಳೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಚಪ್ಪಾಳೆ ತಟ್ಟಿ “ಹ್ಯಾಪಿ ಬರ್ತ್‌ಡೇ ಮೋದಿ ಜೀ” ಎಂದು ಹಾಡಿದರು. ಅಲ್ಲದೆ ಮೋದಿ ಅವರೊಂದಿಗೆ ಸೆಲ್ಫಿ ಸೆರೆಹಿಡಿದು ಸಂಭ್ರಮಿಸಿದರು.

ಪ್ರಧಾನಮಂತ್ರಿ ಅವರು ಧೌಲಾ ಕುವಾನ್‌ನಿಂದ ಯಶೋಭೂಮಿ ದ್ವಾರಕಾ ಸೆಕ್ಟರ್ 25 ರವರೆಗೆ ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್‌ನಲ್ಲಿ ಪ್ರಯಾಣಿಸಿದರು.

ಯಶೋಭೂಮಿ ದ್ವಾರಕಾ ಸೆಕ್ಟರ್ 25 ನಿಲ್ದಾಣವು ಭೂಗತ ಸೌಲಭ್ಯವಾಗಿದ್ದು, ಇಂದಿರಾ ಗಾಂಧಿ ಇಂಟರ್ನ್ಯಾಷನಲ್ (ಐಜಿಐ) ವಿಮಾನ ನಿಲ್ದಾಣದ ಟರ್ಮಿನಲ್ 3 ಮತ್ತು ನವದೆಹಲಿ ರೈಲು ನಿಲ್ದಾಣಕ್ಕೆ ನೇರ ಸಂಪರ್ಕ ಒದಗಿಸುತ್ತದೆ. ಈ ಹೊಸ ವಿಸ್ತರಣಾ ಮಾರ್ಗದಲ್ಲಿ ಪ್ರಯಾಣಿಕರ ಕಾರ್ಯಾಚರಣೆ ಭಾನುವಾರ ಮಧ್ಯಾಹ್ನ 3 ರಿಂದ ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು