ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ.30ರಂದು ಇಲ್ಲಿನ ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ’ ಎಂಬ ಒಂದು ವಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ʼಸಂಕಲ್ಪ್ ಸಪ್ತಾಹ್’ ಇದು ʼಮಹತ್ವಾಕಾಂಕ್ಷೆಯ ಬ್ಲಾಕ್ಗಳ ಕಾರ್ಯಕ್ರಮʼದ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದೆ. ಈ ರಾಷ್ಟ್ರವ್ಯಾಪಿ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಜನವರಿ 7, 2023ರಂದು ಪ್ರಾರಂಭಿಸಿದ್ದರು.
ಶನಿವಾರ ಬೆಳಿಗ್ಗೆ 10 ಗಂಟೆಗೆ ಭಾರತ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ನಾಗರಿಕರ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಬ್ಲಾಕ್ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯನ್ನು ABP ಹೊಂದಿದೆ. ದೇಶದ 329 ಜಿಲ್ಲೆಗಳಲ್ಲಿ 500 ಮಹತ್ವಾಕಾಂಕ್ಷೆಯ ಬ್ಲಾಕ್ಗಳಲ್ಲಿ ಇದನ್ನು ಜಾರಿಗೊಳಿಸಲಾಗುತ್ತಿದೆ.