ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದು, ಅಲ್ಲಿ 5,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಬೆಳಿಗ್ಗೆ 11 ಗಂಟೆಗೆ ಮೋದಿ ನಾಥದ್ವಾರದ ಶ್ರೀನಾಥ್ಜಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಅವರು ನಾಥದ್ವಾರದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಪರಾಹ್ನ 3.15ರ ಸುಮಾರಿಗೆ ಅಬು ರಸ್ತೆಯಲ್ಲಿರುವ ಬ್ರಹ್ಮಕುಮಾರಿಗಳ ಶಾಂತಿವನ ಸಂಕೀರ್ಣಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿಯವರು ಸೂಪರ್ ಸ್ಪೆಷಾಲಿಟಿ ಚಾರಿಟಬಲ್ ಗ್ಲೋಬಲ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಉದಯಪುರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.