News Karnataka Kannada
Monday, May 06 2024
ದೆಹಲಿ

ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಅವರ 104ನೇ ಮನ್ ಕೀ ಬಾತ್

PM Modi's 104th mann ki baat tomorrow morning
Photo Credit : IANS

ದೆಹಲಿ: ನಾಳೆ (ಭಾನುವಾರ) ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 104ನೇ ಸಂಚಿಕೆಯಾಗಿದೆ. ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ನೆಟ್‌ವರ್ಕ್, ಆಕಾಶವಾಣಿ ವೆಬ್‌ಸೈಟ್ ಮತ್ತು ನ್ಯೂಸ್ ಆನ್ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಇದನ್ನು ಆಕಾಶವಾಣಿ, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ. ಆಕಾಶವಾಣಿ ಹಿಂದಿ ಪ್ರಸಾರವಾದ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮ ಪ್ರಸಾರ ಆಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು