ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಭೇಟಿ ನೀಡಲಿದ್ದು, 21,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ನಾಳೆಯೂ ಕೂಡ ಮೋದಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜೂನ್ 18 ರಂದು ಬೆಳಿಗ್ಗೆ 9:15 ಕ್ಕೆ, ಪಾವಗಡ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ದೇವಾಲಯಕ್ಕೆ ಪ್ರಧಾನಿ ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ, ನಂತರ 11:30 ಕ್ಕೆ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ. ನಂತರ, 12:30 ರ ಸುಮಾರಿಗೆ ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸಲಿದ್ದು, ಸುಮಾರು 21,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.