News Karnataka Kannada
Monday, April 29 2024
ದೆಹಲಿ

ಹವಾಮಾನ ಶೃಂಗ ಸಭೆಯ ವಿಡಿಯೋ ಹಂಚಿಕೊಂಡ ಪ್ರಧಾನಿ

PM shares video of climate summit
Photo Credit : News Kannada

ದೆಹಲಿ: ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಸಿಒಪಿ 28 ಹವಾಮಾನ ಶೃಂಗ ಸಭೆ(COP28)ಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊದಲ್ಲಿ, ದುಬೈನಲ್ಲಿ ನಡೆದ COP28 ವಿಶ್ವ ಹವಾಮಾನ ಶೃಂಗಸಭೆಯ ಹೊತ್ತಲ್ಲಿ ಪಿಎಂ ಮೋದಿ ಅನೇಕ ವಿಶ್ವ ನಾಯಕರೊಂದಿಗೆ ಹಸ್ತಲಾಘವ ಮಾಡುತ್ತಿರುವುದು, ಅವರೊಂದಿಗೆ ಸಂವಾದ ನಡೆಸುತ್ತಿರುವುದು ವಿಡಿಯೊದಲ್ಲಿದೆ.

ಶೃಂಗಸಭೆಯ ಹೊತ್ತಲ್ಲೇ ಪ್ರಧಾನಿ ಮೋದಿ ಅವರು ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾದರು. ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಕಿಂಗ್ ಚಾರ್ಲ್ಸ್ ಮಹತ್ವದ ಧ್ವನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದುಬೈನಲ್ಲಿ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯತ್ತ ಸದಾ ಉತ್ಸುಕರಾಗಿರುವ ಕಿಂಗ್ ಚಾರ್ಲ್ಸ್ ಅವರೊಂದಿಗೆ ಸಂವಾದ ನಡೆಸಲು ನನಗೆ ಅವಕಾಶ ಸಿಕ್ಕಿತು. ಅವರು ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟದಲ್ಲಿ ಪ್ರಮುಖ ಧ್ವನಿಯಾಗಿದ್ದಾರೆ. ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಧನ್ಯವಾದಗಳು, ದುಬೈ! ಇದು ಉತ್ಪಾದಕ #COP28 ಶೃಂಗಸಭೆಯಾಗಿದೆ. ಉತ್ತಮ ಗ್ರಹಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿರೋಣ ಎಂದು ಪ್ರಧಾನಿ ಮೋದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು