ದೆಹಲಿ: ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಸಿಒಪಿ 28 ಹವಾಮಾನ ಶೃಂಗ ಸಭೆ(COP28)ಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೊದಲ್ಲಿ, ದುಬೈನಲ್ಲಿ ನಡೆದ COP28 ವಿಶ್ವ ಹವಾಮಾನ ಶೃಂಗಸಭೆಯ ಹೊತ್ತಲ್ಲಿ ಪಿಎಂ ಮೋದಿ ಅನೇಕ ವಿಶ್ವ ನಾಯಕರೊಂದಿಗೆ ಹಸ್ತಲಾಘವ ಮಾಡುತ್ತಿರುವುದು, ಅವರೊಂದಿಗೆ ಸಂವಾದ ನಡೆಸುತ್ತಿರುವುದು ವಿಡಿಯೊದಲ್ಲಿದೆ.
ಶೃಂಗಸಭೆಯ ಹೊತ್ತಲ್ಲೇ ಪ್ರಧಾನಿ ಮೋದಿ ಅವರು ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾದರು. ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಕಿಂಗ್ ಚಾರ್ಲ್ಸ್ ಮಹತ್ವದ ಧ್ವನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದುಬೈನಲ್ಲಿ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯತ್ತ ಸದಾ ಉತ್ಸುಕರಾಗಿರುವ ಕಿಂಗ್ ಚಾರ್ಲ್ಸ್ ಅವರೊಂದಿಗೆ ಸಂವಾದ ನಡೆಸಲು ನನಗೆ ಅವಕಾಶ ಸಿಕ್ಕಿತು. ಅವರು ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟದಲ್ಲಿ ಪ್ರಮುಖ ಧ್ವನಿಯಾಗಿದ್ದಾರೆ. ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಧನ್ಯವಾದಗಳು, ದುಬೈ! ಇದು ಉತ್ಪಾದಕ #COP28 ಶೃಂಗಸಭೆಯಾಗಿದೆ. ಉತ್ತಮ ಗ್ರಹಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿರೋಣ ಎಂದು ಪ್ರಧಾನಿ ಮೋದಿ ಪೋಸ್ಟ್ನಲ್ಲಿ ಬರೆದಿದ್ದಾರೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…