Categories: ದೆಹಲಿ

ಸಿಮ್‌ ಕಾರ್ಡ್‌ ಡೀಲರ್‌ ಗಳಿಗೆ ಪೊಲೀಸ್‌ ವೆರಿಫಿಕೇಶನ್‌ ಕಡ್ಡಾಯ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಮ್ ಕಾರ್ಡ್ ಡೀಲರ್ ಗಳಿಗೆ ಪೊಲೀಸ್ ಪರಿಶೀಲನೆಯನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ, ವಂಚನೆಯ ಚಟುವಟಿಕೆಗಳಿಗೆ ಕಡಿವಾಣ ಹಾಕುವುದಕ್ಕಾಗಿ ಬೃಹತ್ ಸಂಖ್ಯೆಯಲ್ಲಿನ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಕೇಂದ್ರ ಸರ್ಕಾರ 52 ಲಕ್ಷ ಮೊಬೈಲ್ ಸಂಪರ್ಕಗಳನ್ನು ರದ್ದುಗೊಳಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 67,000 ಡೀಲರ್ ಗಳನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದರೆ, 300 ಎಫ್ಐಆರ್ ಗಳನ್ನು ಸಿಮ್ ಕಾರ್ಡ್ ಡೀಲರ್ ಗಳ ವಿರುದ್ಧ ಮೇ ತಿಂಗಳಿನಿಂದ ಈ ವರೆಗೂ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೇ ವಂಚನೆಯ ಚಟುವಟಿಕೆಗಳಲ್ಲಿ ತೊಡಗಿದ್ದ 66,000 ಖಾತೆಗಳನ್ನು ವಾಟ್ಸ್ ಆಪ್ ಸ್ವಯಂ ಪ್ರೇರಿತವಾಗಿ ರದ್ದುಗೊಳಿಸಿದೆ. ನಿಯಮ ಉಲ್ಲಂಘನೆ ಮಾಡುವ ಡೀಲರ್ ಗಳಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು. 10 ಲಕ್ಷ ಸಿಮ್ ಡೀಲರ್ ಗಳಿದ್ದು, ಪೊಲೀಸ್ ಪರಿಶೀಲನೆಗೆ ಸಾಕಷ್ಟು ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಬೃಹತ್ ಸಂಖ್ಯೆಯಗಳಲ್ಲಿನ ಸಂಪರ್ಕಗಳನ್ನು ಪಡೆಯುವುದನ್ನು ಸ್ಥಗಿತಗೊಳಿಸಿ, ವ್ಯಾಪಾರ ಸಂಪರ್ಕದ ಹೊಸ ಪರಿಕಲ್ಪನೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ. “ಅಲ್ಲದೆ, ವ್ಯವಹಾರಗಳ KYC, SIM ಹಸ್ತಾಂತರಿಸುವ ವ್ಯಕ್ತಿಯ KYC ಅನ್ನು ಸಹ ಮಾಡಲಾಗುತ್ತದೆ” ಎಂದು ವೈಷ್ಣವ್ ಮಾಹಿತಿ ನೀಡಿದ್ದಾರೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago