News Karnataka Kannada
Saturday, April 20 2024
Cricket
ದೆಹಲಿ

ಎಲ್.ಕೆ ಅಡ್ವಾಣಿ ಸೇರಿ ಐವರಿಗೆ `ಭಾರತ ರತ್ನ’ ವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ

ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
Photo Credit : NewsKarnataka

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ವನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಚರಣ್ ಸಿಂಗ್ ಪರವಾಗಿ ಅವರ ಮೊಮ್ಮಗ ಆರ್ ಎಲ್ ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿ ಸ್ವೀಕರಿಸಿದರೆ, ಪಿ. ವಿ. ನರಸಿಂಹ ರಾವ್ ಪರವಾಗಿ ಅವರ ಪತ್ರ ಪಿ.ವಿ. ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಪರವಾಗಿ ಅವರ ಪುತ್ರ ರಾಮನಾಥ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ. ಎಸ್. ಸ್ವಾಮಿನಾಥನ್ ಪರ ಅವರ ಪುತ್ರಿ ನಿತ್ಯಾರಾವ್ ಪ್ರಶಸ್ತಿ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು