News Karnataka Kannada
Wednesday, May 08 2024
ದೆಹಲಿ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅಧಿಕಾರವಧಿ ಇಂದಿಗೆ ಮುಕ್ತಾಯ

President Ram Nath Kovind's term ends today
Photo Credit : Twitter

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರವಧಿ ಇಂದು ಮುಕ್ತಾಯವಾಗಲಿದ್ದು, ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದಿದ್ದಾರೆ. “ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು’ ಎಂದು ಹೇಳಿದ್ದಾರೆ.

“ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು’ ಎಂದು ಅವರು ಸಂಸದರಿಗೆ ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಭಾಗವಹಿಸಿದ್ದರು. ಸಂಸತ್ತಿನ ಸದಸ್ಯರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು