ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನ.25 ರಂದು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಸರ್ಕಾರಿ ವಿಮಾನ ತಯಾರಕ ಸಂಸ್ಥೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲಿದ್ದಾರೆ.
ಜತೆಗೆ, ಕಂಪನಿಯ ಕೆಲವು ಉತ್ಪಾದನಾ ಸೌಲಭ್ಯಗಳಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಅಂದರೆ, ಪ್ರಧಾನಿ ಮೋದಿ ಅವರು, ಲಘು ಯುದ್ಧ ವಿಮಾನ ತಯಾರಿಕಾ ಕೇಂದ್ರಕ್ಕೆ ಅವರು ಭೇಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.