News Karnataka Kannada
Thursday, April 25 2024
Cricket
ದೆಹಲಿ

ನಾಳೆಯಿಂದ (ಜುಲೈ 13) ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಪ್ರವಾಸ

Mysuru: Promoting the achievements of the Central Government in the last nine years
Photo Credit : News Kannada

ನವದೆಹಲಿ: ಇತ್ತೀಚೆಗೆ ಅಮೆರಿಕ ಮತ್ತು ಈಜಿಪ್ಟ್‌ ದೇಶಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 13-15 ರವರೆಗೆ ಫ್ರಾನ್ಸ್‌ಗೆ ಭೇಟಿ ನೀಡಲಿದ್ದು, ಪ್ಯಾರಿಸ್‌ನಲ್ಲಿ ನಡೆಯುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಫ್ರಾನ್ಸ್‌ನಲ್ಲಿ ಎರಡು ದಿನಗಳ ಸುದೀರ್ಘ ಪ್ರವಾಸದ ನಂತರ, ಪ್ರಧಾನಿ ಮೋದಿ ಅವರು ಜುಲೈ 15 ರಂದು ಅಬುಧಾಬಿಗೆ ಭೇಟಿ ನೀಡಲಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ಯಾರಿಸ್ ಭೇಟಿ ನೀಡಲಿದ್ದು ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಲಿದ್ದಾರೆ.

ಜು.14 ರಂದು ನಡೆಯಲಿರುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಲಿದ್ದಾರೆ. ಇದೇ ಪರೇಡ್​​ನಲ್ಲಿ ಭೂಸೇನೆ, ವಾಯು ಮತ್ತು ನೌಕಾದಳದ ಭಾರತೀಯ ಸಶಸ್ತ್ರ ಪಡೆಗಳ ತುಕಡಿ ಭಾಗವಹಿಸಲಿದೆ.

ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಪ್ರಧಾನ ಮಂತ್ರಿ ಗೌರವಾರ್ಥವಾಗಿ ರಾಜ್ಯ ಔತಣಕೂಟ ಮತ್ತು ಖಾಸಗಿ ಭೋಜನವನ್ನು ಆಯೋಜಿಸಲಿದ್ದಾರೆ.

ಪ್ರಧಾನಮಂತ್ರಿ ಅವರು ಫ್ರಾನ್ಸ್ ಪ್ರಧಾನಿ, ಸೆನೆಟ್ ಅಧ್ಯಕ್ಷರು ಮತ್ತು ಫ್ರಾನ್ಸ್ ನ ರಾಷ್ಟ್ರೀಯ ಅಸೆಂಬ್ಲಿಯನ್ನು ಭೇಟಿಯಾಗಲಿದ್ದಾರೆ. ಅವರು ಫ್ರಾನ್ಸ್‌ನಲ್ಲಿರುವ ಭಾರತೀಯ ವಲಸೆಗಾರರು, ಭಾರತೀಯ ಮತ್ತು ಫ್ರೆಂಚ್ ಕಂಪನಿಗಳ ಸಿಇಒಗಳು ಮತ್ತು ಫ್ರೆಂಚ್ ಪ್ರಮುಖ ವ್ಯಕ್ತಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು