Categories: ದೆಹಲಿ

ಲೈಂಗಿಕ ಕಿರುಕುಳ ವಿರುದ್ಧ ಪ್ರತಿಭಟನೆ: ಹೊಸ ಸಂಸತ್‌ ಭವನದತ್ತ ಮುನ್ನುಗಿದ ಪ್ರತಿಭಟನಾಕಾರರು

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ಅಂಗವಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಿ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಸಾಕ್ಷಿ ಮಲಿಕ್ ಸೇರಿದಂತೆ ಕುಸ್ತಿಪಟುಗಳು ಹೊಸ ಸಂಸತ್ತಿನತ್ತ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದಾಗ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಜಂತರ್ ಮಂತರ್‌ನಲ್ಲಿದ್ದ ಪೊಲೀಸ್ ಬ್ಯಾರಿಕೇಡ್‌ಗಳನ್ನುಕುಸ್ತಿಪಟುಗಳು ಜಿಗಿಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಆರಂಭಿಕ ವರದಿಗಳ ಪ್ರಕಾರ, ಪೊಲೀಸರು ಈ ಸಂಬಂಧ ಹಲವರನ್ನು ಬಂಧಿಸಿ, ಪ್ರತಿಭಟನಾ ಸ್ಥಳದಿಂದ ಹತ್ತಿರದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಏತನ್ಮಧ್ಯೆ, ಜಂತರ್ ಮಂತರ್‌ನಿಂದ ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದವರೆಗೆ ಬಹುಪದರದ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಟಿಕ್ರಿ, ಘಾಜಿಪುರ, ಸಿಂಘು ಮತ್ತು ಬದರ್‌ಪುರ ಗಡಿ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪೊಲೀಸರು ಸಂಪೂರ್ಣ ವಾಹನ ತಪಾಸಣೆ ನಡೆಸುತ್ತಿದ್ದಾರೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

41 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

50 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

1 hour ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

2 hours ago