ದೆಹಲಿ

ಕತಾರ್‌: ಮರಣದಂಡನೆಗೆ ಗುರಿಯಾದ ಅಧಿಕಾರಿಗಳನ್ನು ಭೇಟಿಯಾದ ರಾಯಭಾರಿ

ನವದೆಹಲಿ: ಕತಾರ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳನ್ನು ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಭೇಟಿಯಾಗಿದ್ದಾರೆ.

ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿದ್ದು ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾದರು ಎಂದು ಹೇಳಿದ್ದಾರೆ. ಪ್ರಕರಣ ಕುರಿತು ನಡೆಯುತ್ತಿರುವ ಮೇಲ್ಮನವಿ ವಿಚಾರಣೆಗೆ ಸಂಬಂಧಿಸಿದಂತೆ ಮಾತನಾಡಿ ಇದುವರೆಗೆ ಎರಡು ವಿಚಾರಣೆಗಳು ನಡೆದಿವೆ.

ನಾವು ವಿಷಯವನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ಎಲ್ಲಾ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುತ್ತಿದ್ದೇವೆ. ಇದು ಸೂಕ್ಷ್ಮ ಸಮಸ್ಯೆ, ಆದರೆ ನಾವು ಏನು ಮಾಡಬಹುದೋ ಅದನ್ನು ಮಾಡುತ್ತೇವೆ. ಮುಂದಿನ ವಿಚಾರಣೆ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಕತಾರ್‌ ಗುಪ್ತಚರ ಸಂಸ್ಥೆಯು ಗೂಢಚಾರಿಕೆ ನಡೆಸಿದ ಆರೋಪದಲ್ಲಿ 8 ಅಧಿಕಾರಿಗಳನ್ನು ಬಂಧಿಸಿತ್ತು.

ಕತಾರ್ ಆಡಳಿತದ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿದ್ದು, ಭಾರತೀಯ ಸಮುದಾಯದ ಯೋಗಕ್ಷೇಮದ ಕುರಿತು ಅವರು ಸಂವಾದ ನಡೆಸಿದ್ದಾರೆ ಎಂದು ಬಾಗ್ಚಿ ಹೇಳಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago