News Karnataka Kannada
Friday, May 17 2024
ದೆಹಲಿ

ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದ ರಾಹುಲ್‌ ಗಾಂಧಿ

Rahul Gandhi gives flying kiss to BJP MPs
Photo Credit : News Kannada

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪರ ಮಾತನಾಡಿದ ರಾಹುಲ್ ಗಾಂಧಿ ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿದ್ದು ಹೊಸ ವಿವಾದ ಹುಟ್ಟುಹಾಕಿದೆ.

ಸಂಸತ್ ಸದಸ್ಯ ಸ್ಥಾನ ಮರುಸ್ಥಾಪನೆ ಬಳಿಕ ಕಲಾಪದಲ್ಲಿ ಭಾಗಿಯಾದ ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದ ರಾಹುಲ್‌ ಗಾಂಧಿಗಾಂಧಿ ಮೊದಲ ಬಾರಿ ಮಾತನಾಡಿದರು. ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಪರ ಸುದೀರ್ಘವಾಗಿ ಮಾತನಾಡಿದರು. ರಾಹುಲ್ ಗಾಂಧಿ ಭಾಷಣದ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತು ಆರಂಭಿಸಿದರು.

ಸ್ಮೃತಿ ಇರಾನಿ ಮಾತು ಆರಂಭಿಸುತ್ತಿದ್ದಂತೆ ಲೋಕಸಭೆಯಿಂದ ನಿರ್ಗಮಿಸಲು ಮುಂದಾದ ರಾಹುಲ್ ಗಾಂಧಿ, ಹಾದಿ ಮಧ್ಯೆ ಕೆಲವು ಫೈಲ್ ಗಳನ್ನು ಕೆಳಗೆ ಬೀಳಿಸಿಕೊಂಡರು. ಈ ವೇಳೆ ಅದನ್ನು ಎತ್ತಿಕೊಳ್ಳಲು ಮುಂದಾದಾಗ ಅಲ್ಲೇ ಕೂತಿದ್ದ ಬಿಜೆಪಿ ಸಂಸದರು, ರಾಹುಲ್ ಗಾಂಧಿ ನೋಡಿ ನಗಲು ಆರಂಭಿಸಿದ್ದರು. ಇದನ್ನು ಗಮನಿಸಿದ ರಾಹುಲ್‌ ಗಾಂಧಿ, ಅವರಿಗೆ ಫ್ಲೈಯಿಂಗ್ ಕಿಸ್ ನೀಡಿ ಮುಂದೆ ನಡೆದರು ಎನ್ನಲಾಗಿದೆ.

ಈ ಯಾವ ದೃಶ್ಯಗಳು ಲೋಕಸಭೆಯಲ್ಲಿರುವ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿ ಸಂಸದರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ನಡೆ ಅನುಚಿತವಾಗಿತ್ತು ಎಂದು ಆರೋಪಿಸಿದ್ದಾರೆ. ಇದು ಅಶ್ಲೀಲವಾಗಿದೆ, ಸ್ತ್ರೀದ್ವೇಷದ ಪುರುಷ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಲು ಸಾಧ್ಯ. ಇಂತಹ ಉದಾಹರಣೆ ಹಿಂದೆಂದೂ ಕಂಡಿರಲಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ನಡೆ ವಿರುದ್ಧ ಲೋಕಸಭೆ ಸ್ಪೀಕರ್‌ ಗೆ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದು, ಗಾಂಧಿಯವರ ನಡವಳಿಕೆಯನ್ನು ‘ಅನುಚಿತ’ ಎಂದು ಕರೆದಿದ್ದಾರೆ. ಶೋಭಾ ಕರಂದ್ಲಾಜೆ ಪತ್ರಕ್ಕೆ ಹಲವು ಮಹಿಳಾ ಸಂಸದರು ಸಹಿ ಹಾಕಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು