News Karnataka Kannada
Friday, April 19 2024
Cricket
ದೆಹಲಿ

ಹೊಲಕ್ಕಿಳಿದು ಭತ್ತ ನಾಟಿ ಮಾಡಿ, ರೈತರ ಸಮಸ್ಯೆ ಆಲಿಸಿದ ರಾಹುಲ್‌ ಗಾಂಧಿ

Rahul Gandhi goes to field, sows paddy, listens to farmers' problems
Photo Credit : News Kannada

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್‌ನಲ್ಲಿ ಹೊಲದಲ್ಲಿ ಭತ್ತ ನಾಟಿ ಮಾಡುತ್ತಿದ್ದ ರೈತರೊಂದಿಗೆ ಕೈಜೋಡಿಸಿದರು. ಅಲ್ಲದೆ ಅವರೊಂದಿಗೆ ಸಂವಾದವನ್ನು ನಡೆಸಿದರು.

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಘರ್ಹಿ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಶಿಮ್ಲಾಗೆ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಸೋನಿಪತ್‌ನಲ್ಲಿ ರೈತರನ್ನು ಭೇಟಿ ಮಾಡಲು ನಿರ್ಧರಿಸಿದರು.

ತನ್ನ ವಾಹನ ನಿಲ್ಲಿಸಿ ಕೃಷಿ ಜಮೀನುಗಳಿಗೆ ತೆರಳಿ ಟ್ರ್ಯಾಕ್ಟರ್ ಓಡಿಸಿ ಭತ್ತದ ಬೆಳೆ ನಾಟಿ ಮಾಡಿದರು. ಭಾರತ್ ಜೋಡೋ ಯಾತ್ರೆಯನ್ನು ಪೂರ್ಣಗೊಳಿಸಿದ ನಂತರವೂ ರಾಹುಲ್ ಗಾಂಧಿ ಜನರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಪ್ರತಾಪ್‌ಘರ್ಹಿ ಹೇಳಿದರು. ಬಳಿಕ ಹವಾಮಾನ ವೈಪರೀತ್ಯದಿಂದಾಗಿ ರಾಹುಲ್ ಗಾಂಧಿ ಶಿಮ್ಲಾ ಪ್ರವಾಸವನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಕುರಿತು ಟ್ವೀಟ್ ಮಾಡಿರುವ ಪಕ್ಷದ ಮುಖಂಡ ಸುರ್ಜೇವಾಲಾ, “ರಾಹುಲ್ ಗಾಂಧಿಯವರು ಇಂದು ಬೆಳಗ್ಗೆ ಹರಿಯಾಣದ ಗೊಹಾನದ ಮದೀನಾ ಗ್ರಾಮದಲ್ಲಿ ರೈತರ ಹೊಲಗಳಿಗೆ ತೆರಳಿ ಭತ್ತ ನಾಟಿ ಮಾಡಿದರು. ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು, ಅವರ ಯೋಗಕ್ಷೇಮ ವಿಚಾರಿಸಿದರು ಎಂದು ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು