News Karnataka Kannada
Saturday, April 13 2024
Cricket
ದೆಹಲಿ

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ, ಸುಪ್ರೀಂ ಮೆಟ್ಟಿಲೇರಿದ ರಾಹುಲ್‌

18 Congress leaders, including Rahul Gandhi, detained by Delhi Police
Photo Credit : News Kannada

ನವದೆಹಲಿ: ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ತಮ್ಮ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಕಳೆದ ಶುಕ್ರವಾರ ನಿರಾಕರಿಸಿತ್ತು. ಇಂದು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್, ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿ, ಐಪಿಸಿ 499, 500ರಡಿ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ, ಲೋಕಸಭೆಯ ಸ್ಪೀಕರ್ ಕಾರ್ಯಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.

2019ರ ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ರಾಹುಲ್​ ಹೇಳಿಕೆಯಿಂದ ಆಕ್ರೋಶಗೊಂಡ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು