News Karnataka Kannada
Monday, May 06 2024
ದೆಹಲಿ

ರಾಮಮಂದಿರ ಟೀಕಿಸುವ ಭರದಲ್ಲಿ ಐಶ್ವರ್ಯಾ ರೈಗೆ ರಾಹುಲ್ ಗಾಂಧಿ ಅವಮಾನ !

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಸೊಸೆ ಐಶ್ವರ್ಯಾ ರೈ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.
Photo Credit : News Kannada

ಹೊಸದಿಲ್ಲಿ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಸೊಸೆ ಐಶ್ವರ್ಯಾ ರೈ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಅನೇಕ ನಟಿಯರು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಕಿಡಿಕಾರಿದ್ದು, ಕರ್ನಾಟಕ ಬಿಜೆಪಿ ಕೂಡ ವಾಗ್ದಾಳಿ ನಡೆಸಿದೆ.

ಜನವರಿ 22ರಂದು ಅಯೋಧ್ಯಾದಲ್ಲಿ ನಡೆದ ರಾಮ ಮಂದಿರ ಉದ್ಘಾಟನೆ ಸಮಾರಂಭದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವಾಗ ರಾಹುಲ್ ಗಾಂಧಿ ಅವರು ಐಶ್ವರ್ಯಾ ರೈ ಹೆಸರು ಪ್ರಸ್ತಾಪಿಸಿದ್ದರು. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜನರನ್ನು ಸಮಾರಂಭಕ್ಕೆ ಆಹ್ವಾನಿಸಿರಲಿಲ್ಲ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ ಅವರೆಲ್ಲ ಬಂದಿದ್ದರು ಎಂದು ಟೀಕಿಸಿದ್ದರು.

“ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ನೀವು ನೋಡಿದ್ದಿರಾ? ಅಲ್ಲಿ ಒಂದೇ ಒಂದು ಒಬಿಸಿ ಮುಖ ಇತ್ತೇ? ಅಲ್ಲಿ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ನರೇಂದ್ರ ಮೋದಿ ಇದ್ದರು” ಎಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾನುವಾರ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ರಾಹುಲ್ ಗಾಂಧಿ ಹೇಳಿದ್ದರು.
“ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ 73ರಷ್ಟಿರುವ ಜನರು ಸಮಾರಂಭದಲ್ಲಿ ಎಲ್ಲಿಯೂ ಕಾಣಿಸಲಿಲ್ಲ. ಅವರಿಗೆ ದೇಶದ ಆಡಳಿತ ಸಿಗುವುದನ್ನು ಬಿಜೆಪಿ ಎಂದಿಗೂ ಬಯಸಿಲ್ಲ” ಎಂದು ಆರೋಪಿಸಿದ್ದರು.

ಇದರ ನಂತರ ನಡೆದ ಮತ್ತೊಂದು ರಾಲಿಯಲ್ಲಿ ಕೂಡ ಐಶ್ವರ್ಯಾ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದರು. “ಟೆಲಿವಿಷನ್ ಚಾನೆಲ್‌ಗಳು ಐಶ್ವರ್ಯಾ ಅವರು ನರ್ತಿಸುವುದು ಮತ್ತು ಬಚ್ಚನ್ ಸಾಬ್ ಭಲ್ಲೆ ಭಲ್ಲೆ ಮಾಡುವುದನ್ನು ಮಾತ್ರ ತೋರಿಸುತ್ತವೆ. ಬಡ ಜನರ ಕುರಿತು ಅವರು ಏನನ್ನೂ ತೋರಿಸುವುದಿಲ್ಲ. ಬಿಜೆಪಿ/ ಆರೆಸ್ಸೆಸ್‌ನ ಹಣ ಪಡೆದು ಟ್ರೋಲ್ ಮಾಡುವವರು ತಮ್ಮ ಕೊಳಕು ಭಾಷೆಗಳಿಂದ ಐಶ್ವರ್ಯಾ ರೈ ಅವರನ್ನು ನರ್ತಕಿ ಎಂದು ಕರೆಯುತ್ತಾರೆ” ಎಂದಿದ್ದರು.

ಆದರೆ ಐಶ್ವರ್ಯಾ ರೈ ಅವರು ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಆದರೂ ಅವರ ಹೆಸರನ್ನು ರಾಹುಲ್ ಗಾಂಧಿ ಎಳೆದು ತಂದಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಅವರ ಬಗ್ಗೆ ಇಷ್ಟು ಕೀಳಾಗಿ ಮಾತನಾಡಬಾರದಿತ್ತು ಎಂದು ರಾಗಾ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು