News Karnataka Kannada
Monday, May 06 2024
ದೆಹಲಿ

ಸದಸ್ಯತ್ವ ಅನರ್ಹತೆ: ವಾಪಸ್‌ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ರಾಹುಲ್‌

Rahul Gandhi pays floral tributes at Gandhi statue
Photo Credit : IANS

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಸಂಸತ್ತಿಗೆ ಆಗಮಿಸಿದ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.

ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯಾ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು