Categories: ದೆಹಲಿ

ಇಂದು ಮತ್ತೆ ಇಡಿ ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿ ಅವರಿಗೆ ಫೆಡರಲ್ ಏಜೆನ್ಸಿ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಕೊವಿಡ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ಪಡೆದಿದ್ದಾರೆ. ರಾಹುಲ್ ಗಾಂಧಿ ಅವರು ನಿನ್ನೆ ಮತ್ತು ಮೊನ್ನೆ (ಜೂನ್ 13 ಹಾಗೂ 14ರಂದು) ಇಡಿ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಇಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ‌.

ರಾಹುಲ್ ಗಾಂಧಿ ಅವರು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ಎಐಸಿಸಿಗೆ ಆಗಮಿಸಿದರು. ಅಲ್ಲಿಂದ 11ಗಂಟೆಗೆ ಇಡಿ ಕಚೇರಿಗೆ ತೆರಳಿದರು. ರಾತ್ರಿ 11.40ರವರೆಗೂ ವಿಚಾರಣೆ ಎದುರಿಸಿದರು. ಮಧ್ಯಹ್ನ 2 ಗಂಟೆ ಭೋಜನ ವಿರಾಮ ತೆಗೆದುಕೊಂಡಿದ್ದರು. ಒಟ್ಟು 10ಗಂಟೆಗೂ ಹೆಚ್ಚು ವಿಚಾರಣೆ ಎದುರಿಸಿದ್ದರು.

ರಾಹುಲ್ ಗಾಂಧಿ ಬೆಳಿಗ್ಗೆ 11.15ಕ್ಕೆ ಎಐಸಿಸಿ ಕಚೇರಿಯಿಂದ ಇಡಿ ಕಚೇರಿಗೆ ಆಗಮಿಸಿದರು. ಅವರ ಜೊತೆ ಇಡಿ ಅಧಿಕಾರಿಗಳು ಔಪಚಾರಿಕ ವಿಚಾರಣೆ ನಡೆಸಿದರು. ಮಧ್ಯಾಹ್ನ 2.15ಕ್ಕೆ ಭೋಜನ‌ ವಿರಾಮ ನೀಡಲಾಯಿತು. ಭೋಜನ ವಿರಾಮದ ವೇಳೆ ರಾಹುಲ್ ಗಾಂಧಿ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ಆ ಸಂದರ್ಭದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಇದ್ದರು‌. ನಂತರ 3.30ಕ್ಕೆ ಮತ್ತೆ ಇಡಿ ಕಚೇರಿಗೆ ಬಂದ ರಾಹುಲ್ ಗಾಂಧಿ ಅವರ ವಿಚಾರಣೆ ತಡರಾತ್ರಿ 11.15ರವರೆಗೂ ನಡೆಯಿತು. ನಿನ್ನೆ ಸುಮಾರು 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿ ಹೆಚ್ಚಿನ ವಿಚಾರಣೆಗಾಗಿ ಇಂದು ಮತ್ತೆ ಬರುವಂತೆ ಸೂಚನೆ ನೀಡಲಾಗಿದೆ.

2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago