ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇತ್ತ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೆ ಕುತೂಹಲ ಹೆಚ್ಚಿಸಿತ್ತು.
ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು.
ಈ ವಾರಂತ್ಯದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.