Categories: ದೆಹಲಿ

ಅಮೇಥಿಯಿಂದ ರಾಹುಲ್, ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ಖಚಿತ

ನವದೆಹಲಿ: ಉತ್ತರ ಪ್ರದೇಶದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಸೋನಿಯಾ ಗಾಂಧಿ  ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇತ್ತ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ  ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೆ ಕುತೂಹಲ ಹೆಚ್ಚಿಸಿತ್ತು.

ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ  ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು‌. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು.

ಈ ವಾರಂತ್ಯದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

Ashika S

Recent Posts

ಹೂಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

2 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

11 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

15 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

20 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

23 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

41 mins ago