News Karnataka Kannada
Tuesday, May 07 2024
ದೆಹಲಿ

ರಾಜೀವ್‌ ಗಾಂಧಿ ಕಂಡ ಕನಸು ನನಸು- ಸೋನಿಯಾ ಗಾಂಧಿ

Rajiv Gandhi's dream has come true: Sonia Gandhi
Photo Credit : News Kannada

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕನಸಾಗಿತ್ತು, ಅದು ಈಗ ನನಸಾಗಬಹುದು. ಅದನ್ನು ಶೀಘ್ರದಲ್ಲೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.

ಈ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಅದರೊಂದಿಗೆ ಜಾತಿ ಗಣತಿ ನಡೆಸುವ ಮೂಲಕ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯದ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಅವರು ಹೇಳಿದರು. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಸೋನಿಯಾ ಗಾಂಧಿ, “ಕಾಂಗ್ರೆಸ್ ಪಕ್ಷದ ಪರವಾಗಿ ನಾನು ‘ನಾರಿ ಶಕ್ತಿ ವಂದನ್ ಅಧಿನಿಯಮ್ 2023’ (ಮಹಿಳಾ ಮೀಸಲಾತಿ ಮಸೂದೆ) ಬೆಂಬಲಕ್ಕೆ ನಿಂತಿದ್ದೇನೆ. ಭಾರತೀಯ ಮಹಿಳೆಗೆ ಸಾಗರದಂತೆ ತಾಳ್ಮೆ ಇದೆ. ಅವರು ನದಿಯಂತೆ ಎಲ್ಲರ ಒಳಿತಿಗಾಗಿ ಶ್ರಮಿಸಿದ್ದಾರೆ” ಎಂದು ಹೇಳಿದರು. ಸರೋಜಿನಿ ನಾಯ್ಡು, ಸುಚೇತಾ ಕೃಪ್ಲಾನಿ, ವಿಜಯ ಲಕ್ಷ್ಮೀ ಪಂಡಿತ್ ಮತ್ತು ರಾಜಕುಮಾರಿ ಅಮೃತ್ ಕೌರ್ ಸೇರಿದಂತೆ ಹಲವು ಸಾಧಕ ಮಹಿಳೆಯರು ಭಾರತದ ನೆಲದಲ್ಲಿ ಜನ್ಮತಾಳಿದ್ದಾರೆ. ಇಂದಿರಾ ಗಾಂಧಿ ಅವರ ವ್ಯಕ್ತಿತ್ವ ಮಹಿಳಾ ಸಬಲೀಕರಣದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದರು. ಇದು ನನ್ನ ಜೀವನದ ಅತ್ಯಂತ ಸಂತಸದ ಕ್ಷಣವಾಗಿದೆ, ಮೊದಲ ಬಾರಿಗೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ನಿರ್ಧರಿಸುವ ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ಅವರು ತಂದರು. ಆದರೆ ಏಳು ಮತಗಳ ಕೊರತೆಯಿಂದ ರಾಜ್ಯಸಭೆಯಲ್ಲಿ ಅಂಗೀಕಾರವಾಗುವುದು ತಪ್ಪಿಹೋಯಿತು.

ನಂತರ ಪಿ.ವಿ.ನರಸಿಂಹರಾವ್ ಅವರ ನೇತೃತ್ವದಲ್ಲಿ ಆ ಮಸೂದೆ ಪಾಸ್‌ ಆಯಿತು. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಮಹಿಳಾ ರಾಜಕಾರಣಿಗಳಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು