News Karnataka Kannada
Sunday, April 14 2024
Cricket
ದೆಹಲಿ

ಲೇಹ್‌ನಲ್ಲಿ ಸೈನಿಕರ ಜೊತೆ ಹೋಳಿ ಹಬ್ಬ ಸಂಭ್ರಮಿಸಿದ ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೋಳಿ ಹಬ್ಬದ ಪ್ರಯುಕ್ತ ಲಡಾಖ್ನ ಲೇಹ್ಗೆ ತೆರಳಿ ಸೈನಿಕರೊಂದಿಗೆ ಹೋಳಿ ಹಬ್ಬವನ್ನು ಆಚರಿಸಿದರು.
Photo Credit : NewsKarnataka

ನವದೆಹಲಿ:  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೋಳಿ ಹಬ್ಬದ ಪ್ರಯುಕ್ತ ಲಡಾಖ್‌ನ  ಲೇಹ್‌ಗೆ ತೆರಳಿ ಸೈನಿಕರೊಂದಿಗೆ  ಹೋಳಿ  ಹಬ್ಬವನ್ನು ಆಚರಿಸಿದರು.

ಹೋಳಿ ಹಬ್ಬ ಆಚರಣೆಯ ಸಮಯದಲ್ಲಿ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಇದ್ದರು. ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ  ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ  ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

ಈ ವೇಳೆ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್ ಸಾಮಾನ್ಯ ಪ್ರದೇಶವಲ್ಲ. ಇದು ಭಾರತದ ಸಾರ್ವಭೌಮತ್ವ ಮತ್ತು ನಿರ್ಣಯದ ಸಂಕೇತ. ಇದು ನಮ್ಮ ರಾಷ್ಟ್ರೀಯ ನಿರ್ಣಯವನ್ನು ಪ್ರತಿನಿಧಿಸುತ್ತದೆ ಎಂದರು.

ನಿಮ್ಮನ್ನು, ನಿಮ್ಮ ಮಕ್ಕಳನ್ನು, ನಿಮ್ಮ ಹೆತ್ತವರನ್ನು, ಕುಟುಂಬವನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಅದಕ್ಕೆ ನಾವು ಯಾವಾಗಲೂ ಸಿದ್ಧರಿದ್ದೇವೆ. ನಾನು ನಿಮಗೆ ಏನನ್ನೂ ಹೇಳಬೇಕಿಲ್ಲ. ನೀವು ನಿಮ್ಮ ದೇಹ ಮತ್ತು ಮನಸ್ಸನ್ನು ಅರ್ಪಿಸಿ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೀರಿ. ನಮ್ಮ ಸರ್ಕಾರವೂ ಸಶಸ್ತ್ರಪಡೆಗಳ ಸುಧಾರಣೆಗಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು