ದೆಹಲಿ

ರಾಜ್ಯಸಭೆಯಲ್ಲೂ ಡಿಜಿಟಲ್‌ ಡೇಟಾ ಸಂರಕ್ಷಣಾ ಮಸೂದೆ ಅಂಗೀಕಾರ

ಹೊಸದಿಲ್ಲಿ: ರಾಜ್ಯಸಭೆಯು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ (ಡಿಪಿಡಿಪಿಬಿ) 2023 ಅನ್ನು ಧ್ವನಿ ಮತದಿಂದ ಬುಧವಾರ ಅಂಗೀಕರಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ ನಂತರ ಮಸೂದೆ ಕಾನೂನಾಗಿ ಮಾರ್ಪಾಡುಗೊಳ್ಳಲಿದೆ.

ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಈ ವಿಧೇಯಕದಲ್ಲಿ ರೂಪಿಸಲಾಗಿದ್ದು, ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೇಲ್ಮನೆಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸಿದ್ದರು. ಉದ್ಯಮ ವಲಯದ ಮುಖಂಡರು ಡಿಜಿಟಲ್ ಪ್ರೊಟೆಕ್ಷನ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆ 2023 ರ ಮಸೂದೆ ಅಂಗೀಕಾರವನ್ನು ಶ್ಲಾಘಿಸಿದ್ದಾರೆ. ಭಾರತವು ವೇಗವಾಗಿ ಡಿಜಿಟಲೀಕರಣಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಸೂದೆಯು ನಿರ್ಣಾಯಕ ಮತ್ತು ಬಹುನಿರೀಕ್ಷಿತ ಶಾಸನವಾಗಿದೆ ಎಂದು ಹೇಳಿದ್ದಾರೆ. ಜನರ ಡಿಜಿಟಲ್ ಗೌಪ್ಯತೆ ಹಕ್ಕನ್ನು ಈ ಮೂಲಕ ಎತ್ತಿ ಹಿಡಿಯಲಾಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಈ ಮಹತ್ವದ ಹೆಜ್ಜೆಯನ್ನು ಸಾಧಿಸಲು ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಅವಕಾಶ ನೀಡಿರುವುದು ನನಗೆ ಹೆಮ್ಮೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago